ವಿಜಯಪುರ: ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಇಬ್ಬರು ಬೈಕ್ ಸವಾರರು ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ನಡೆದಿದೆ. ಇನ್ನು ಅಪಘಾತದಲ್ಲಿ ಎರಡು ಬೈಕ್ಗಳು ಜಖಂಗೊಂಡಿವೆ. ಅಲ್ಲದೇ, ಬೈಕ್ನಲ್ಲಿ ಮೊಟ್ಟೆ ತೆಗೆದುಕೊಂಡು ಹೋಗುತ್ತಿದಾಗ ಈ ಅವಘಡ ಸಂಭವಿಸಿ, ಅಪಾರ ಪ್ರಮಾಣದ ಮೊಟ್ಟೆಗಳು ಹಾನಿಯಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.