ಹಾಸನ: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಗಂಡಸಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಗಂಡಸಿ ಗ್ರಾಮದ ರಮೇಶ್ (45) ಸಾವಿಗೀಡಾದವ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಲೆಮಹದೇಶ್ವರ ಬೆಟ್ಟದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಡಿಆರ್ ಇನ್ಸ್ಪೆಕ್ಟರ್ ರಾಮು ಎಸ್ಕಾರ್ಟ್ ಮಾಡುತ್ತಿದ್ದರು. ಈ ವೇಳೆ ಪೆಟ್ರೋಲ್ ಬಂಕ್ನಿಂದ ಹೊರ ಬರುತ್ತಿದ್ದ ಬೈಕ್ ಸವಾರ ಎಸ್ಕಾರ್ಟ್ ವಾಹನಕ್ಕೆ ಅಡ್ಡ ಬಂದಿದ್ದ ಎನ್ನಲಾಗಿದೆ. ಬೈಕ್ ಸವಾರ ರಮೇಶ್ ಹೆಲ್ಮಟ್ ಧರಿಸಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.