ವಿಜಯಪುರ: ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿಯಾಗಿರುವ ಪರಿಣಾಮ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಸಿಂದಗಿ ತಾಲ್ಲೂಕಿನ ಬನಹಟ್ಟಿ ಗ್ರಾಮದ ವಿದ್ಯಾರ್ಥಿನಿ ದೀಪಾ ಹೊಸಮನಿ ಗಾಯಗೊಂಡಿದ್ದು, ಊರಿಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿದ್ದ ದೀಪಾಗೆ KA 28 EU 0347 ಬೈಕ್ ಡಿಕ್ಕಿಯಾಗಿದೆ. ಗಾಯಾಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.