ವಿಜಯಪುರ: ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ಪಟ್ಟಣದ ಮನಗೂಳಿ ಗ್ರಾಮದಲ್ಲಿ ನಡೆದಿದೆ. ಫೈರೋಜ್ ಮೀರ್ದೆ, ಮೌಲಾಲಿ ಗಡದಿನ್ನಿ, ಸುನೀಲ ಕಾಂಬ್ಳೆ, ರಫೀಕ್ ಲೋಣಿ ಬಂಧಿತ ಆರೋಪಿಗಳು. ಇನ್ನು ಬಂಧಿತರಿಂದ 5.35 ಲಕ್ಷ ಮೌಲ್ಯದ 12 ಬೈಕ್ಗಳನ್ನು ಜಪ್ತಿಗೈದಿದ್ದಾರೆ. ಈ ಕುರಿತು ಮನಗೂಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.