ವಿಜಯಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮ ದಿನ ಪ್ರಯುಕ್ತ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಬಿಜೆಪಿ ನಗರ ಮಂಡಳ ಹಾಗೂ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ ನಡೆಯಿತು. ವಿಜಯಪುರ ನಗರದ ಗ್ಯಾಂಗ್ ಬೌವಡಿಯಲ್ಲಿರುವ ಯಂತ್ರೋದ್ಧಾರ ಹನುಮಾನ್ ಮಂದಿರದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಕಾರ್ಯಕರ್ತರು, ಸ್ಥಳೀಯರು ರಕ್ತದಾನ ಮಾಡಿದರು. 50 ಕ್ಕೂ ಹೆಚ್ಚು ಜನರಿಂದ ರಕ್ತದಾನ ನಡೆಯಿತು.
ರಕ್ತದಾನ ಶಿಬಿರದಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ, ಯುವ ಮೊರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಹಾಗೂ ಗಣ್ಯರು ಉಪಸ್ಥಿತರಿದ್ದರು.