ವಿಜಯಪುರ: ಅಪರಿಚಿತ ವ್ಯಕ್ತಿಯ ಶವವೊಂದು ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಬ್ಯಾಕೋಡ ರಸ್ತೆಯ ಬಳಿಯಿರುವ ಕಸ ತ್ಯಾಜ್ಯ ವಿಲೇವಾರಿ ಘಟಕದ ಹತ್ತಿರ ಪತ್ತೆಯಾಗಿದೆ. ಕೊಲೆ ಮಾಡಿ ತಂದು ಈ ಸ್ಥಳದಲ್ಲಿ ಹಾಕಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ 30 ರಿಂದ 35 ವಯಸ್ಕನೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಸಿಂದಗಿ ಪೋಲಿಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.