ವಿಜಯಪುರ: ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯ ಶವವೊಂದು ವಿಜಯಪುರ ನಗರದ ವಜ್ರಹನುಮಾನ್ ಗೇಟ್ ಬಳಿ ಪತ್ತೆಯಾಗಿದೆ. 67 ವರ್ಷದ ಮಹಮ್ಮದ್ ಹುಸೇನ್ ಖಾಜಿ ಮೃತಪಟ್ಟಿರುವ ದುರ್ದೈವಿ. ಇನ್ನು ಇದು ಕೊಲೆಯೋ ಅಥವಾ ಸಹಜ ಸಾವೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/11/IMG_20231105_133545-1024x588.jpg)