ವಿಜಯಪುರ: ಅಪ್ರಾಪ್ತ ವಯಸ್ಸಿನ ಪ್ರೇಮಿಗಳಿಬ್ಬರ ಶವಗಳು ನೇಣು ಬೀಗಿದ ಸ್ಥಿತಿಯಲ್ಲಿ ಮರದಲ್ಲಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಅಂಗಡಗೇರಿಯಲ್ಲಿ ಪತ್ತೆಯಾಗಿದೆ. ಸಚಿನ ಮಾದರ ಹಾಗೂ ಸಕ್ಕುಬಾಯಿ ಮಾದರ ಶವಗಳು ಮರದಲ್ಲಿ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೂಡಗಿ ಎನ್ಟಿಪಿಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.