ವಿಜಯಪುರ: ಕೆನಾಲ್ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅಡವಿಸಂಗಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸುಮಾರು 40-45 ವಯಸ್ಸಿನ ಪುರುಷನ ಶವ ಪತ್ತೆಯಾಗಿದೆ. ಆದ್ರೇ, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.