ಬೆಂಗಳೂರು: ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಮಾಹಿತಿ ಸಿಕ್ಕಿದೆ. ಇಮೇಲ್ ಮೂಲಕ ಬೆಂಗಳೂರಿನ ವಿವಿಧ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಬಸವೇಶ್ವರ ನಗರ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ ಬೆದರಿಕೆ ಬಾಂಬ್ ಬೆದರಿಕೆ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕ ಶುರುವಾಗಿದೆ. ನಿಮ್ಮ ಶಾಲೆಗಳಿಗೆ ಬಾಂಬ್ ಇಡುತ್ತೇವೆ ಎಂದು ಮೇಲ್ ಮಾಡಿದ್ದು, ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಇನ್ನು ಇಮೇಲ್ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.