ವಿಜಯಪುರ: ಸಿಡಿಲು ಬಡಿದು ಒಂದು ಎತ್ತು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಸಮೀಪದ ಖಾನಿಕೆರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಗದ್ದೆಪ್ಪ ಬಸನಗೌಡ ಪಾಟೀಲ ಎಂಬುವರಿಗೆ ಸೇರಿದ ಎತ್ತಿಗೆ ಸಿಡಿಲು ಬಡಿದ ಪರಿಣಾಮ ಅಸುನೀಗಿದೆ. ಸುಮಾರು 80 ಸಾವಿರ ಮೌಲ್ಯದ ಎತ್ತು ಸಾವನ್ನಪ್ಪಿದೆ. ಇದರಿಂದ ರೈತ ಗದ್ಯಪ್ಪ ಕಣ್ಣೀರಿನ ಕೈ ತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದಕ್ಕಾಗಿ ಪ್ರಕೃತಿ ವಿಕೋಪದಡಿಯಲ್ಲಿ ಪರಿಹಾರ ನೀಡುವಂತೆ ರೈತ ಸರ್ಕಾರಕ್ಕೆ ಮನವಿ ಮಾಡಿದ್ದಾನೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.