ವಿಜಯಪುರ: ಸರ್ಕಾರಿ ಬಸ್ ಬ್ರೇಕ್ ಫೇಲ್ಯಾಗಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಡವಲಗಾದ ಜೋಡು ಗುಡಿ ಬಳಿ ಬುಧವಾರ ನಡೆದಿದೆ.
ಬಸ್ ಪಲ್ಟಿಯಾಗಿರುವ ಹಿನ್ನೆಲೆ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ವಿಜಯಪುರದಿಂದ ಇಂಡಿಗೆ ಹೊರಟಿದ್ದ ಕೆಎ 28 ಎಫ್ 2161 ನಂಬರಿನ ಬಸ್ ಪಲ್ಟಿಯಾಗಿದೆ. ಬಸ್ನಲ್ಲಿ ಸುಮಾರು 60 ಜನ ಪ್ರಯಾಣಿಕರಿದ್ದರು. ಗಾಯಗಳು ಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.