ವಿಜಯಪುರ: ಸೂಕ್ತ ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ಶುಕ್ರವಾರ ಸರ್ಕಾರಿ ಬಸ್ ಗಳನ್ನು ತಡೆದು ವಿದ್ಯಾರ್ಥಿಗಳು ಹೋರಾಟ ಮಾಡಿದರು.
ಶಾಲಾ ಕಾಲೇಜುಗಳಿಗೆ ಹೋಗಲು ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ ತೊಂದರೆಯಾಗುತ್ತಿದೆ. ಇದರಿಂದ ಕ್ಲಾಸ್ಗಳು ಮಿಸ್ ಆಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ಸಮಸ್ಯೆ ಪರಿಹಾರ ಮಾಡಬೇಕು ಎಂದು ಸಾರಿಗೆ ಇಲಾಖೆ ಆಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಸಾರಿಗೆ ಇಲಾಖೆ ಆಧಿಕಾರಿಗಳ ಭೇಟಿ ನೀಡಿ ಸೂಕ್ತ ಬಸ್ ವ್ಯವಸ್ಥೆ ಮಾಡುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈ ಬಿಡಲಾಯಿತು.