ವಿಜಯಪುರ: ಅಂತರ್ ಕಾಲೇಜು ಮಟ್ಟದ ಚೆಸ್ ಪಂದ್ಯಾವಳಿ ವಿಜಯಪುರ ನಗರದ ಬುದ್ಧ ವಿಹಾರದಲ್ಲಿ ಶುಕ್ರವಾರ ನಡೆಯಿತು. ಅಂಜುಮನ್ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ಅಂತರ್ ಕಾಲೇಜು ಚೆಸ್ ಪಂದ್ಯಾವಳಿಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಬುದ್ಧಿವಂತಿಕೆಗೂ ಕೆಲಸ ನೀಡುವ ನಿಟ್ಟಿನಲ್ಲಿ ಚೆಸ್ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ ಎಂದು ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಎಸ್ ಎಸ್ ನಾಗಠಾಣ ಹೇಳಿದರು.