ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಶಾಲಿಯಾಗಿದೆ. ಇನ್ನೂ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ಸಂಭ್ರಮಾಚರಣೆ ಮಾಡಿದ್ದಾರೆ. ಇನ್ನು 17 ಬಿಜೆಪಿ ಅಭ್ಯರ್ಥಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಅಭಿನಂದನೆಗಳು ಟ್ವಿಟರ್ ಮೂಲಕ ಕೋರಿದರು.
ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 35 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಗೆಲ್ಲುವ ಮೂಲಕ ನಮ್ಮ ಪಕ್ಷ ಅಭೂತಪೂರ್ವ ಸಾಧನೆಗೈದಿದ್ದು, ವಿಜಯ ಪತಾಕೆ ಹಾರಿಸಿದ ಪ್ರತಿಯೊಬ್ಬ ಸದಸ್ಯರಿಗೂ ಹಾರ್ದಿಕ ಅಭಿನಂದನೆಗಳು. ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಕಾರ್ಯಕರ್ತರಿಗೆ ಹೃದಯಾಂತರಾಳದಿಂದ ಧನ್ಯವಾದಗಳು ಎಂದಿದ್ದಾರೆ.