ಧಾರವಾಡ: ಸಾರಿಗೆ ಬಸ್ ಹಾಗೂ ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಧಾರವಾಡ ತಾಲೂಕಿನ ಸೋಮಾಪುರದ ಬಳಿ ನಡೆದಿದೆ.
ವನಹಳ್ಳಿ ಗ್ರಾಮದಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದ್ದರಿಂದ ಕಾರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನ ಧಾರವಾಡದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಯಲ್ಲಿ ಕಾರ್ ಮುಂಭಾಗ ಬಹುತೇಕ ಜಖಂಗೊಂಡಿದೆ. ಅಲ್ಲದೇ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.