ವಿಜಯಪುರ: ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಜೂ.26 ರಿಂದ 28ರವರೆಗೆ ಮೂರು ದಿನದ ಸಮಗ್ರ ಮೀನು ಸಾಕಾಣಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಭಾಗವಹಿಸುವ ಎಲ್ಲ ರೈತರಿಗೆ ಪ್ರಮಾಣ ಪತ್ರ ಮತ್ತು ಪ್ರಯಾಣ ಭತ್ಯೆಯನ್ನು ನೀಡಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 9480518679, 9945959704, 08352-264516 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಭೂತನಾಳ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.