ವಿಜಯಪುರ: ದಾಖಲಾತಿ ಇಲ್ಲದೇ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 480 ಗ್ರಾಂ ಚಿನ್ನಾಭರಣ, 6 ಲಕ್ಷ ನಗದನ್ನು ಪೊಲೀಸರು ಜಪ್ತಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಕ್ರಾಸ್ ಬಳಿ ಗುರುವಾರ ನಡೆದಿದೆ. MH 13- AZ 4201 ನಂಬರಿನ ಕಾರಿನಲ್ಲಿ ವಸ್ತುಗಳನ್ನು ಜಪ್ತಿಗೈದಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ನಿವಾಸಿ ವಿಜಯ ಪಡೋಳಕರ ವಶಕ್ಕೆ ಪಡೆಯಲಾಗಿದೆ. ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ ನೇತೃತ್ವದಲ್ಲಿ ಜಪ್ತಿಗೈದಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.