ವಿಜಯಪುರ: ಪತ್ರಕರ್ತರು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಹ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ವಿಜಯಪುರ ನಗರದ ಕಂದಗಲ್ ಹಣಮಂತರಾಯ್ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಲ್ಲದೇ, ಸಮಾಜದಲ್ಲಿ ಬದಲಾವಣೆ ತರುವ ಕೆಲಸ ಪತ್ರಕರ್ತರ ಮಾಡಬೇಕು. ಇದರಿಂದ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.
ಈ ವೇಳೆಯಲ್ಲಿ ನಡೆದಾಡುವ ದೇವರು ಸಿದ್ಧೇಶ್ವರ ಶ್ರೀ, ಪೊಲೀಸ ಅಧಿಕಾರಿ ರಾಮ ಅರಸಿದ್ಧಿ, ಪತ್ರಕರ್ತರಾದ ಸುಭಾಷ್ ಹೂಗಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.