ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮೇ.8ರ ಸಂಜೆ 6 ಗಂಟೆಯಿಂದ ಮೇ.10ರ ಮಧ್ಯರಾತ್ರಿಯವರೆಗೆ ಹಾಗೂ ಮತ ಏಣಿಕೆ ದಿನವಾದ ಮೇ.13ರ ಬೆಳಿಗ್ಗೆ 6 ಗಂಟೆಯಿಂದ ಮೇ.14ರ ಬೆಳಿಗ್ಗೆ 6 ಗಂಟೆವರೆಗೆ ಜಿಲ್ಲೆಯಾದ್ಯಂತ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಿ ಹಾಗೂ ಶುಷ್ಕ ದಿನಗಳೆಂದು ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ. ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನಗಳು ಅಂದರೆ ದಿನಾಂಕ : 08-05-2023ರ ಸಂಜೆ 6 ಗಂಟೆಯಿಂದ ದಿನಾಂಕ : 10-05-2023ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಮತ ಏಣಿಕೆ ದಿನವಾದ ದಿನಾಂಕ: 13-05-2023ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ : 14-05-2023ರ ಬೆಳಿಗ್ಗೆ 6 ಗಂಟೆವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಅವರು ಆದೇಶ ಹೊರಡಿಸಿದ್ದಾರೆ.