ವಿಜಯಪುರ: ಸರ್ಕಾರಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತದಲ್ಲಿ ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.
ಕಾರಿನಲ್ಲಿದ್ದ ಓರ್ವ ಮಹಿಳೆ, ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಕೊಲ್ಹಾರ ತಾಲೂಕಿನ ಕುಬಕಡ್ಡಿ ಗ್ರಾಮದ ಬಳಿ ಕಲಬುರಗಿ ಮೂಲದ ಕಿಯಾ ಕಾರಿನಲ್ಲಿದ್ದ ಏಳು ಜನರ ಪೈಕಿ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ, ಸುನಂದಾಳ ಮೂರು ತಿಂಗಳ ಮಗಳು ಸುಮನ್ ಹಾಗೂ ಶರಣಮ್ಮ ಬಸವರಾಜ ಕಲಶೆಟ್ಟಿ ಮೃತಪಟ್ಟಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.