ವಿಜಯಪುರ: ದ್ರಾಕ್ಷಿ ಮತ್ತು ತೊಗರಿ ಹಾಗೂ ಇನ್ನಿತರೆ ಬೆಳೆಗಳಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಜಿಲ್ಲಾ ದ್ರಾಕ್ಷಿ ಬೆಳೆಗಾರರ ಸಂಸ್ಕರಣ ಹಾಗೂ ಮಾರಾಟ ಸಹಕಾರಿ ಸಂಘದವರು ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಅತೀವೃಷ್ಟಿ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ದ್ರಾಕ್ಷಿ ಹಾಗೂ ತೊಗರಿ ಮತ್ತು ಇನ್ನಿತರ ಬೆಳೆಗಳು ತುಂಬಾ ಹಾನಿಗೊಳಗಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿಯೇ ಪ್ರಮುಖ ತೋಟಗಾರಿಕೆ ಬೆಳೆಯಾದ ದ್ರಾಕ್ಷಿ ಮತ್ತು ದಾಳಿಂಬೆ ಮತ್ತು ತೊಗರಿ ಇನ್ನಿತರ ಬೆಳೆಗಳು ಸಂಪೂರ್ಣ ಹಾಳಾಗಿದೆ. ಅದಕ್ಕಾಗಿ ಶೀಘ್ರ ಬೆಳೆ ಸಮೀಕ್ಷೆ ಮಾಡಿ ಯೋಗ್ಯ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದೇ ವೇಳೆಯಲ್ಲಿ ಅಪರ ಜಿಲ್ಲಾಧಿಕಾರಿ ಮೂಲಕ ಸರ್ಕಾರ ಮನವಿ ಸಲ್ಲಿಸಿದರು.