ವಿಜಯಪುರ: ಸುಕ್ಷೇತ್ರ ಯಲಗೂರಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯಿತು. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಯಲಗೂರ
ಜಾಗೃತ ದೇವರೆಂದೇ ಖ್ಯಾತಿಯಾಗಿರುವ ಶ್ರೀ ಯಲಗೂರು ಆಂಜನೇಯ ದೇವಸ್ಥಾನದಲ್ಲಿ ಹುಂಡಿ ಏಣಿಕೆಯನ್ನು ನಿಡಗುಂದಿ ತಹಶೀಲ್ದಾರ್ ಕಿರಣಕುಮಾರ ನೇತೃತ್ವದಲ್ಲಿ ಮಾಡಲಾಯಿತು. ಆಂಜನೇಯ ದೇವಸ್ಥಾನದ ಆಡಳಿತ ಮಂಡಳಿ ಹುಂಡಿ ಎಣಿಕಾ ಕಾರ್ಯದಲ್ಲಿ ಭಾಗವಹಿಸಿದ್ದು, ಹುಂಡಿಯಲ್ಲಿ ನೇಪಾಳ ದೇಶದ ಕರೆನ್ಸಿಗಳು ಪತ್ತೆಯಾಗಿವೆ. ಅಲ್ಲದೇ, ದೇವರಿಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಭಕ್ತರು ಪತ್ರಗಳು ಕೂಡ ಲಭ್ಯ ಆಗಿದೆ. ಪಿಎಸ್ಐ, ಎಸ್ ಡಿ ಎ ಸೇರಿದಂತೆ ಇತರೆ ಸರ್ಕಾರಿ ನೌಕರಿಗಾಗಿಯೂ ದೇವರಿಗೆ ಭಕ್ತರು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಸಾಲ ಮಾಡಿದ್ದೇನೆ ಪರಿಹಾರ ತೋರಿಸು, ಮರಾಠಿ ಭಾಷೆಯಲ್ಲೂ ಪತ್ರ ಬರೆದಿದ್ದಾರೆ. ಎಷ್ಟು ಹಣ ಸಂಗ್ರಹವಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.