ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಮತ ಎಣಿಕೆ ಕಾರ್ಯವು ಒಟ್ಟು 7 ಕೊಠಡಿಗಳಲ್ಲಿ ನಡೆಯಲಿದ್ದು, ಪ್ರತಿ ಕೊಠಡಿಯಲ್ಲಿ ಒಟ್ಟು 5 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾಹಿತಿ ನೀಡಿದರು.
ವಿಜಯಪುರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 35 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ವಾರ್ಡಗೆ ಒಂದು ಟೇಬಲ್ ವ್ಯವಸ್ಥೆ ಮಾಡಿದ್ದು, ಎಲ್ಲ ವಾರ್ಡಗಳ ಮತ ಎಣಿಕೆ ಕಾರ್ಯ ಏಕಕಾಲದಲ್ಲಿ ಆರಂಭಿಸಲಾಗುವುದು. ನಾಳೆ ಬೆಳಗ್ಗೆ 7:30ಕ್ಕೆ ಮತ ಎಣಿಕೆ ಕೇಂದ್ರದ ಸ್ಟಾಂಗ್ ರೂಮ್ ಓಪನ್ ಮಾಡಲಾಗುವುದು. ತದನಂತರ ಮತ ಎಣಿಕೆ ನಡೆಯಲಿದೆ ಎಂದರು.
ಅಲ್ಲದೇ, ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್ಪಿ ಎಚ್ಡಿ ಆನಂದಕುಮಾರ ಮಾಹಿತಿ ನೀಡಿದರು. ಓರ್ವ ಅಡಿಸನಲ್ ಎಸ್ಪಿ, 3 ಡಿವೈಎಸ್ಪಿ, 12 ಸಿಪಿಐ, 15 ಪಿಎಸ್ಐ ಸೇರಿದಂತೆ 250 ಪೊಲೀಸ್ ಇಲಾಖೆಯಿಂದ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅಲ್ಲದೇ, ವಿಜಯೋತ್ಸವ ವೇಳೆಯಲ್ಲಿ ಅಹಿತಕರ ಘಟನೆಗಳು ಆಗದಂತೆ ಜಿಲ್ಲಾ ಪೊಲೀಸ ಇಲಾಖೆಯಿಂದ ಸೂಕ್ತ ಕ್ರಮಕೈಗೊಳ್ಳಲಾಗಿದೆ ಎಂದರು.
ಇನ್ನು ಮಹಾನಗರ ಪಾಲಿಕೆ ಚುನಾವಣೆಯಲ್ಲಿ 174 ಅಭ್ಯರ್ಥಿಗಳ ಭವಿಷ್ಯ ನಾಳೆ ತಿಳಿದು ಬರಲಿದೆ. ಅಕ್ಟೋಬರ್ 28ರಂದು ನಡೆದ ಮತದಾನದಲ್ಲಿ 55.17% ರಷ್ಟು ಮತದಾನ ಆಗಿದೆ….