ವಿಜಯಪುರ: ಸಿಮಿಯ ಮತ್ತೊಂದು ಪ್ರತಿರೂಪ ಪಿಎಫ್ಐ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಪಿಎಫ್ಐ, ಎಸ್ಡಿಪಿಐ ಬ್ಯಾನ್ ಮಾಡಬೇಕು. ಎರಡು ದೇಶ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿವೆ ಎಂದು ಆರೋಪಿಸಿದರು. ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾರ್ವಜನಿಕ ಪ್ರದೇಶದಲ್ಲಿ ಬಾಂಬ್ ಹಾಕುವಂತಹ ಪ್ರಯತ್ನ ಮಾಡಿದ್ರು. ಅನೇಕ ಗಂಭೀರ ಆರೋಪಿಗಳು ದೇಶದಲ್ಲಿ ಸಾಕಷ್ಟು ಚರ್ಚೆಗೊಳಪಟ್ಪಿದ್ದವು.
ಕೇಂದ್ರ ಸರ್ಕಾರ ಅತ್ಯಂತ ದೃಢ ನಿಲುವು ತಗೊಂಡು. 200 ಕಡೆಗಳಲ್ಲಿ ದಾಳಿ ಮಾಡಿದಾಗ ವಿದೇಶಿ ಹಣದ ದಾಖಲೆ ಸಿಕ್ಕಿವೆ. ಎರಡು ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಅನ್ನೋದು ದೇಶಭಕ್ತರ ಆಗ್ರಹವಿದೆ ಎಂದರು.