ಗೃಹಲಕ್ಷ್ಮೀ ಯೋಜನೆಯಡಿ 3,55,453 ಫಲಾನುಭವಿಗಳ ನೋಂದಣಿ
ವಿಜಯಪುರ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಯನ್ನು ಜುಲೈ 20 ರಂದು ಜಾರಿಗೆ ತರಲಾಗಿದ್ದು,ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000 ಗಳನ್ನು ನೀಡುವ ಯೋಜನೆಯಾಗಿದೆ. ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ಅರ್ಜಿದಾರರು ಗ್ರಾಮ ಒನ್,ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಗೃಹಲಕ್ಷ್ಮಿ ಯೋಜನೆ ಪ್ರಾರಂಭದಿಂದ (20-07-23) ಇಲ್ಲಿಯವರೆಗೆ (02-08-2023) 498477 ರೇಷನ್ ಕಾರ್ಡ್ ಗಳ ಪೈಕಿ 355453 (71.31%) ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, 1,43,024 ಅರ್ಜಿ ಸಲ್ಲಿಸಲು ಬಾಕಿಯಿರುತ್ತದೆ. ಕೂಡಲೇ ಅರ್ಹರು ಹತ್ತಿರದ ಗ್ರಾಮ ಒನ್,ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.