ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ 3.5 ರಷ್ಟು ಭೂಮಿ ಕಂಪಿಸಿದೆ. ಆಲಮಟ್ಟಿಯ ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.
ವಿಜಯಪುರ ನಗರದ ಬಹುತೇಕ ಬಡಾವಣೆಗಳಲ್ಲಿ ಭೂಕಂಪನದ ಅನುಭವವಾಗಿದೆ. ಭೂಕಂಪನದ ಕೇಂದ್ರ ಬಿಂದು ಮಹಾರಾಷ್ಟ್ರದಲ್ಲಿ ಕಂಡು ಬಂದಿದ್ದು, ಅಂದಾಜು 5 ಕಿಮೀ ಆಳದಲ್ಲಿ ತರಂಗಗಳು ಸೃಷ್ಟಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ತಿಳಿಸಿದ್ದಾರೆ.