ವಿಜಯಪುರ: ಪ್ರಯಾಣಿಕರೊಬ್ಬರು ಬಸ್ನಲ್ಲಿ ಬಿಟ್ಟು ಹೋಗಿದ್ದ 3 ಲಕ್ಷ ಮೌಲ್ಯದ ಚಿನ್ನದ ಬ್ಯಾಗ್ ಅನ್ನು ವಾರಸುದಾರರಿಗೆ ಮರಳಿಗೆ ಪ್ರಾಮಾಣಿಕತೆ ಮೆರೆದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ-ನಾರಾಯಣಪುರ ತಡೆ ರಹಿತ ಬಸ್ನಲ್ಲಿ ನಡೆದಿದೆ.
ಮುದ್ದೇಬಿಹಾಳ ಸಾರಿಗೆ ಘಟಕದ ಚಾಲಕ ಕಂ ನಿರ್ವಾಹಕ ಸಿ.ಆರ್.ಪತ್ತೇಪೂರ ಮಾನವೀಯತೆ ಮೆರೆದರು. ಮುದ್ದೇಬಿಹಾಳದಿಂದ ನಾಲತವಾಡಕ್ಕೆ ಪ್ರಯಾಣಿಸಿದ್ದ ಮಹಿಳೆ ಆಫ್ರೀನ್ ನಾಯ್ಕೋಡಿ ಕಿವಿಯೋಲೆ, ಉಂಗುರ, ಬೋರಮಾಳ, ಚೈನ್ ಮುಂತಾದ ಚಿನ್ನದ ಆಭರಣಗಳಿದ್ದ ಬ್ಯಾಗನ್ನು ಸೀಟಿನಲ್ಲೇ ಮರೆತು ಇಳಿದು ಹೋಗಿದ್ದರು. ಅದನ್ನು ಜೋಪಾನವಾಗಿ ತೆಗೆದಿರಿಸಿದ್ದರು. ಲಕ್ಷಾಂತರ ಬೆಲೆ ಬಾಳುವ ಚಿನ್ನದ ಆಭರಣಗಳನ್ನು ಪ್ರಯಾಣಿಕರಿಗೆ ಮರಳಿಸಿ ಮಾನವೀಯತೆ ಮೆರೆದಿದ್ದಾರೆ.