ವಿಜಯಪುರ: ಕಾರು ಹಾಗೂ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿ ಗುರುವಾರ ನಡೆದಿದೆ.
ಇನ್ನು ಅಪಘಾತದಲ್ಲಿ ಪ್ರಯಾಣಿಕರು ಹಾಗೂ ಕಾರ್ ಚಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ನಂಬರ KA 38 A 3375 ಹಾಗೂ ಸರ್ಕಾರಿ ಬಸ್ ಮಧ್ಯೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.