ವಿಜಯಪುರ: ಮೂರು ಕಾರುಗಳ ಮಧ್ಯೆ ಸರಣಿ ಅಪಘಾತವಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ನಿಡಗುಂದಿ ರಸ್ತೆಯಲ್ಲಿ ನಡೆದಿದೆ.
ಇನ್ನು ಎರಡು ಕಾರುಗಳ ಮಧ್ಯೆ ಡಿಕ್ಕಿಯಾಗಿದೆ. ಇದೇ ವೇಳೆಯಲ್ಲಿ ಹಿಂಬದಿ ಬರುತ್ತಿದ್ದ ಮತ್ತೊಂದು ಕಾರ್ ಡಿಕ್ಕಿಯಾಗಿದೆ. ಇದರಿಂದ ಎರಡು ಕಾರಗಳು ಪಲ್ಟಿಯಾಗಿದೆ.
ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಲ್ಲದೇ, ಮೂರು ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.