ವಿಜಯಪುರ: ಕಬ್ಬು ತುಂಬಿಕೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾಶಂಕರ ಸಕ್ಕರೆ ಕಾರ್ಖಾನೆ ಕ್ರಾಸ್ ಬಳಿ ತಡರಾತ್ರಿ ನಡೆದಿದೆ.
ಅಗರಖೇಡ ಗ್ರಾಮದ ಶಂಕರಲಿಂಗ ವಾಘದೋರೆ (28) ಮೃತ ದುರ್ದೈವಿ. ಇನ್ನೂ ಶಂಕರಲಿಂಗ ಆಳೂರ ಸೇರಿ ಇನ್ನೊಬ್ಬ ವ್ಯಕ್ತಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಝಳಕಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.