ವಿಜಯಪುರ: ಶಿಶುವನ್ನು ಸ್ಮಶಾನದ ಬಾವಿಯಲ್ಲಿ ಪಾಪಿ ತಾಯಿ ಎಸೆದು ಹೋಗಿರುವ ಘಟನೆ ವಿಜಯಪುರ ನಗರದ ದೇವಗಿರಿ ಸ್ಮಶಾನದ ಬಾವಿಯಲ್ಲಿ ನಡೆದಿದೆ. ಸ್ಮಶಾನದ ಬಾವಿ ಮೋಟರ್ ಸ್ಟಾರ್ಟ್ ಮಾಡಲು ಹೋದಾಗ ಶಿಶುವಿನ ಶವ ಪತ್ತೆಯಾಗಿದೆ. 8 ರಿಂದ 9 ತಿಂಗಳ ಶಿಶುವಿನ ಶವ ಸಿಕ್ಕಿದೆ. ಸ್ಥಳಕ್ಕೆ ಆದರ್ಶ ನಗರ ಪಿಎಸ್ಐ ಯತೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.