ವಿಜಯಪುರ: ನನಗೆ ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗದೇ ಇದ್ದರೂ ಸಹಿತ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು
ವಿಜಯಪುರದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಹೇಳಿದರು.
ಕಳೆದ ಮೂವತ್ತು ವರ್ಷಗಳಿಂದ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೆನೆ. ಕಳೆದ ಬಾರಿ ನನಗೆ ಬಿಜೆಪಿ ಪಕ್ಷದಿಂದ ಟಿಕೇಟ್ ಕೊಡಲಿಲ್ಲ. ಆದ್ರೂ, ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದು, ಅದಕ್ಕಾಗಿ ಕಾರ್ಯಕರ್ತರ ಒತ್ತಾಯದ ಹಿನ್ನಲೆ ಮೊದಲಿಗೆ ಬಿಜೆಪಿಯಿಂದ ಟಿಕೇಟ್ ಕೇಳುತ್ತೇನೆ ಎಂದರು.