https://www.instagram.com/p/Ct3ajmktyM8/?igshid=MzRlODBiNWFlZA==
K1N ಡೆಸ್ಕ್: ಅಮೇರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡೆನ್ ಅವರೊಂದಿಗೆ ಪ್ರಧಾನಿ ಮೋದಿ ಸಭೆಯಲ್ಲಿನ ಒಂದು ಫೋಟೋನ್ನು ಡಬ್ಲ್ಯುಡಬ್ಲ್ಯುಇ ಸೂಪರ್ ಸ್ಟಾರ್ ಜಾನ್ ಸೇನಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದು, ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಜಾನ್ ಸೇನಾ ಶೇರ್ ಮಾಡಿಕೊಂಡಿರುವ ಫೋಟೋದಲ್ಲಿ ಪ್ರಧಾನಿ ಮೋದಿ ತಮ್ಮ ಅಂಗೈ ಅನ್ನು ತೋರಿಸುತ್ತಿದ್ದಾರೆ. ಫೋಟೋ ನೋಡಿದ ನೆಟ್ಟಿಗರು ಜಾನ್ ಸೇನಾ ಅವರ ಡಬ್ಲ್ಯುಡಬ್ಲ್ಯುಇ ಸಿಗ್ನೇಚರ್ ಆಗಿರುವ ‘ಯು ಕಾಂಟ್ ಸೀ ಮಿ’ (ನೀನು ನನ್ನನ್ನು ನೋಡಲು ಸಾಧ್ಯವಿಲ್ಲ) ಸ್ಟೈಲ್ ನೆನಪಿಸಿಕೊಳ್ಳುತ್ತಿದ್ದಾರೆ. ಇಬ್ಬರ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗುತ್ತಿದೆ. ಜಾಲತಾಣದಲ್ಲಿ ಈ ಫೋಟೋ ಭಾರೀ ಸದ್ದು ಮಾಡುತ್ತಿದ್ದು, 4 ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ.
![](https://karnataka1news.com/wp-content/uploads/2023/06/modi-1024x627.jpg)