ವಿಜಯಪುರ: ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಅತ್ಯವಶ್ಯಕವಾಗಿವೆ ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಡಾ.ಜಾವೆದ ಜಮಾದಾರ ಹೇಳಿದರು.
ವಿಜಯ ಪುರ ನಗರದ ಪ್ರತಿಷ್ಠಿತ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯುಕೇಷನ್ ಸೊಸೈಟಿಯ ರವೀಂದ್ರನಾಥ ಠಾಗೋರ್ ಶಾಲಾ ಕಾಲೇಜಿನ ವಾರ್ಷಿಕ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸದೇ ಇರೋ ಕಾರಣ ಮಕ್ಕಳ ದೈಹಿಕ ಬೆಳವಣಿಗೆ ಕುಂಠಿತವಾಗುತ್ತಿ ರುವದಕ್ಕೆ ಆತಂಕ ವ್ಯಕ್ತಪಡಿಸಿದರು. ಅಲ್ಲದೇ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಹೆಚ್ಚೆಚ್ಚು ಸಾಧನೆ ಮಾಡಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆ ಗಳಲ್ಲಿ ಭಾರತ ಹೆಚ್ಚಿನ ಸಾಧನೆ ಮಾಡಬೇಕಾಗಿದೆ. ನಾವು ಈಗ ಕೇವಲ ಒಂದೊ ಎರಡೊ ಪದಕ ಗಳಿಗೆ ಖುಷಿ ಪಡ್ತಾ ಇರೋದು ವಿಷಾಧನೀಯ, ಹೀಗಾಗಿ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು ಎಂದರು. ಪೋಷಕರು ಕೂಡ ದೈನಂದಿನ ಒತ್ತಡಗಳಿಂದ ದೂರಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮಹಾನಗರ ಪಾಲಿಕೆ ಸದಸ್ಯ ರಾಹುಲ್ ಜಾಧವ ಮಾತನಾಡಿ ನನಗೆ ಶಾಲಾ ದಿನಗಳಲ್ಲಿ ಕ್ರಿಕೆಟ್ ಆಟದ ಬಗ್ಗೆ ಆಸಕ್ತಿ ಇತ್ತು. ಕ್ರೀಡೆ ಜೊತೆಗೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಕರೆ ನೀಡಿದರು. ಶಾಲಾ ಕ್ರೀಡಾ ವಾರ್ಷಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಫಥ ಸಂಚಲನ ನಡೆಯಿತು. ಬಳಿಕ ಪ್ರತಿಜ್ಞಾ ವಿಧಿ ಭೋಧಿಸಲಾಯಿತು. ವಿದ್ಯಾರ್ಥಿ ಗಳಿಂದ ಆಕರ್ಷಕ ಮನರಂಜನಾ ಹಾಗೂ ಯೋಗಾ ಕಾರ್ಯಕ್ರಮಗಳು ಪೋಷಕರ ಮನ ಗೆದ್ದವು. ಇನ್ನೂ ಕಾರ್ಯಕ್ರಮದ ವೇದಿಕೆಯಲ್ಲಿ ವಿಜಯಪುರ ಮಹಾನಗರ ಪಾಲಿಕೆ ಸದಸ್ಯರಾದ ಆಶೀಪ್ ಶಾನವಾಲೆ, ರಾಹುಲ್ ಜಾಧವ, ಉದ್ಯಮಿ ಇರ್ಫಾನ್ ಶ್ಯಾನವಾಲೆ , ಛತ್ರಪತಿ ಶಿವಾಜಿ ಮಹಾರಾಜರ ಎಜ್ಯುಕೇಷನ್ ಸೊಸೈಟಿ ಸಂಸ್ಥಾಪಕ ಅಧ್ಯಕ್ಷ ವಸಂತ ಗಾಯಕವಾಡ, ಅಧ್ಯಕ್ಷ ಶಿವಾಜಿ ಗಾಯಕವಾಡ, ಕಾರ್ಯದರ್ಶಿ ರೀತಾ ಗಾಯಕವಾಡ, ಪ್ರಿನ್ಸಿಪಲ್ ಫರೀನ್ ಖಾನ್ ಹಾಗೂ ಕಾಲೇಜು ಪ್ರಿನ್ಸಿಪಲ್ ಜಯರಾಮ್ ಸೇರಿದಂತೆ ಸಂಸ್ಥೆಯ ಪಿ.ಆರ್.ಓ.ವಿಜಯಕುಮಾರ ಸಾರವಾಡ ಉಪಸ್ಥಿತರಿದ್ದರು. ಬಳಿಕ ಅತಿಥಿಗಳು ಅಥ್ಲೆಟಿಕ್ ಹಾಗೂ ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಿದರು.