ವಿಜಯಪುರ: 2023-24ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 03 ವರ್ಷದ ಡಿಪ್ಲೋಮಾ ಕೊರ್ಸ್ ಪ್ರಥಮ ವರ್ಷ ಮತ್ತು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಡಿಪ್ಲೋಮಾ ಕೋರ್ಸ್ (ಡಿ.ಹೆಚ್.ಟಿ.ಟಿ) ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್.15 ರವೆರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು, ಜಿಲ್ಲಾ ಪಂಚಾಯತಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಸ್ಟೇಷನ್ ಹಿಂಭಾಗದ ರಸ್ತೆ ಕಚೇರಿಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.