ವಿಜಯಪುರ: 2023-24 ನೇ ಸಾಲಿನ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಶುಲ್ಕ ಮರುಪಾವತಿ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ಪೋರ್ಟಲ್(ಎಸ್ ಎಸ್ ಪಿ) ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಅನ್ ಲೈನ್ ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆ.29 ರ ತನಕ ವಿಸ್ತರಿಸಲಾಗಿದೆ. 2023-24 ನೇ ಸಾಲಿನಲ್ಲಿ ಪಿಯುಸಿ, ಡಿಪ್ಲೊಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು http://ssp.postmatric.karnataka.gov in/ ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ http://dom.karnataka.gov.in ಅಥವಾ ಹತ್ತಿರದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಕಚೇರಿಗೆ ಸಂಪರ್ಕಿಸಬಹುದು ಎಂದು ವಿಜಯಪುರ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.