ಮೈಸೂರು: ಸಾಲಬಾದೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ಸಣ್ಣಪ್ಪ (50) ಮೃತ ರೈತ. ಸಾಲಬಾದೆಯಿಂದ ಮನನೊಂದು ಸಣ್ಣಪ್ಪ ಗ್ರಾಮದ ಸಮೀಪವಿರುವ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 20 ಗುಂಟೆ ಜಮೀನು ಹೊಂದಿದ್ದ ಸಣ್ಣಪ್ಪನವರು, ಬೆಳೆದ ಬೆಳೆಗೆ ಬೆಲೆ ಸಿಗದೆ ನಷ್ಟ, ಕೆಲ ದಿನಗಳ ಹಿಂದ ಸುರಿದ ಮಳೆಗೆ ಬೆಳೆ ಹಾನಿಯಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದಿದ್ದ ರೈತ ನೇಣಿಗೆ ಶರಣಾಗಿದ್ದಾರೆ. ಈ ಕುರಿತು ನಂಜಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.