ವಿಜಯಪುರ: ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಡಿತದಿಂದ ಮಹಿಳೆ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ. 45 ವರ್ಷದ ರೈತ ಮಹಿಳೆ ಲಕ್ಷ್ಮೀಬಾಯಿ ವಿಠೋಬಾ ಪೂಜಾರಿ ಮೃತಪಟ್ಟಿರುವ ದುರ್ದೈವಿ. ಇನ್ನೂ ವಿಷಪುರೀತ ಹಾವು ಕಡಿತದಿಂದ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊರ್ತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.