ವಿಜಯಪುರ: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡ ವಿಜಯಪುರ ಜಿಲ್ಲಾ ಎರಡನೇ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಕರ್ನಾಟಕ ಸಂಭ್ರಮ 50ರ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಸಾಧಕಿಯರಾದ ವೀಣಾ ಕೆಲೂರ, ಭಾಗ್ಯಲಕ್ಷ್ಮಿ ಕೌಲಗಿ, ಸುಜಾತಾ ಬೈರಶೆಟ್ಟಿ, ನೀಲಾ ಸುರೇಶ ಜತ್ತಿ ಇವರನ್ನು ಮಹಿಳಾ ಸಮ್ಮೇಳನದ ಸರ್ವಾಧ್ಯಕ್ಷರಾದ ಭಾರತಿ ಪಾಟೀಲ, ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಸೇರಿದಂತೆ ಗಣ್ಯರು ಸನ್ಮಾನಿಸಿದರು.