ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟು ಹಾಕಿದೆ. ಹುಬ್ಬಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಬೆಂಕಿಯ ಜ್ವಾಲೆ ಮುಗಿಲು ಮುಟ್ಟಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಇನ್ನೂ ಸುದ್ಧಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆಸಿದ್ದಾರೆ.