ವಿಜಯಪುರ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಜಿಲ್ಲಾಸ್ಪತ್ರೆಯ ಹಳೆಯ ದಾಖಲಾತಿಗಳನ್ನು ಇಟ್ಟಿದ್ದ ಕೊಠಡಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕೊಠಡಿಯಲ್ಲಿದ್ದ ದಾಖಲಾತಿಗಳು ಸುಟ್ಟು ಕರಕಲು ಆಗಿದ್ದಾವೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿದರು. ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.