ವಿಜಯಪುರ: ಮೊಸರುನಾಡಿನಲ್ಲಿ ಗುಂಡಿನ ದಾಳಿ ನಡೆದಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ಹಳೆಯ ವೈಷಮ್ಯ ಹಿನ್ನಲೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ. ರಾಜು ನ್ಯಾಮಗೊಂಡ ಮೇಲೆ ಶಿವು ಜಗದಾಳೆ ಎಂಬಾತ ಗುಂಡು ಹಾರಿಸಿದ್ದಾನೆ. ಮೂರು ಸುತ್ತು ಗುಂಡಿನ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರೂ ಸಂಬಂಧಿಕರಾಗಿದ್ದು, ಮೊದಲಿನಿಂದಲೆ ವೈಷಮ್ಯ ಹೊಂದಿದ್ದರು ಎನ್ನಲಾಗಿದೆ. ಸದ್ಯ ಗುಂಡಿನ ದಾಳಿಗೊಳಗಾದ ರಾಜು ನ್ಯಾಮಗೊಂಡ ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಗುಂಡಿನ ದಾಳಿ ನಡೆಸಿದ ಶಿವು ಜಗದಾಳೆ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೊಲ್ಹಾರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ರೋಣಿಹಾಳ ಗ್ರಾಮದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/12/IMG-20231227-WA0126-1-1024x1024.jpg)