ಒಡಿಶಾ: ಅಪರಿಚಿತ ದುಷ್ಕರ್ಮಿಗಳು ಒಡಿಶಾದ ಆರೋಗ್ಯ ಸಚಿವ ನಬಾ ದಾಸ್ ಮೇಲೆ ಗುಂಡಿನ ದಾಳಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಹಾರಿಸಿದ ಗುಂಡು ಸಚಿವರ ಎದೆ ಹೊಕ್ಕಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಸಚಿವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬ್ರಜರಾಜನಗರಕ್ಕೆ ಹೋಗುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ನಬಾ ದಾಸ್ ಅವರು ವಾಹನದಿಂದ ಇಳಿಯುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಗುಂಡಿನ ದಾಳಿಯ ಹಿಂದಿನ ನಿಖರವಾದ ಕಾರಣ ತಿಳಿದುಬಂದಿಲ್ಲ. ರಕ್ತದ ಮಡುವಿನಲ್ಲಿ ಬಿದ್ದಿದ್ದ ದಾಸ್ರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಘಟನೆಯಿಂದ ಬಿಜೆಡಿ ಕಾರ್ಯಕರ್ತರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದು, ಘಟನಾ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ.