ವಿಜಯಪುರ: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎರಡು ದಿನ ರಾಜ್ಯ ಮಟ್ಟದ ಅಂಗನವಾಡಿ ನೌಕರರ ಪ್ರಥಮ ರಾಜ್ಯ ಸಮ್ಮೇಳನಕ್ಕೆ ಶನಿವಾರ ಚಾಲನೆ ನೀಡಲಾಯಿತು.
ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಕೆಂಪು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಗರದ ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ನಗರದ ವಿವಿಧ ಕಡೆಗೆ ರ್ಯಾಲಿ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕವಾಗಿ ಮೂಲಭೂತ ಸೌಕರ್ಯ ಸೇರಿದಂತೆ 9 ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದರು.