ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿಯ ಜಿಲ್ಲೆಯ ಹಾರೂಗೇರಿ ಪಟ್ಟಣದ ಬಳಿ ಅಪಘಾತ ಆಗಿದೆ. ಲಕ್ಷ್ಮಣ ಸವದಿ ಸೇರಿ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಥಣಿಯಿಂದ ಗೋಕಾಕ್ ಗೆ ತೆರಳುತ್ತಿದ್ದರು. ಈ ವೇಳೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಲಕ್ಷ್ಮಣ ಸವದಿ ಅವರಿದ್ದ ಕಾರು ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.