ವಿಜಯಪುರ: ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಕೃಷ್ಣ ಯೋಜನೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಕ್ಬುಲ್ ಬಾಗವಾನ್ ಹೇಳಿದರು. ವಿಜಯಪುರ ನಗರದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡದೇ ರಾಜಕೀಯ ಮಾಡುತ್ತಿದೆ. ಅಲ್ಲದೇ, ಕೃಷ್ಣ ಯೋಜನೆಗೆ ಬೇಕಿರುವ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ಕಿಡಿಕಾರಿದರು. ಅದಕ್ಕಾಗಿ ಡಿಸೆಂಬರ್ 30 ರಂದು ನಗರದ ದರ್ಬಾರ್ ಮೈದಾನದಲ್ಲಿ ಕೃಷ್ಣ ಯೋಜನೆ ಬೃಹತ್ ಸಮಾವೇಶ ನಡೆಯಲಿದೆ. ಅದಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕರು ಸೇರಿದಂತೆ ಪಕ್ಷದ ಹಿರಿಯ, ಕಿರಿಯ ಮುಖಂಡ ಭಾಗವಹಿಸುತ್ತಾರೆ. ಅದಕ್ಕಾಗಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಆಗಮಿಸಬೇಕು ಎಂದು ಮನವಿ.