ಹುಬ್ಬಳ್ಳಿ: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯ ಮೇಲೆ ಗ್ಯಾಂಗ್ವೊಂದು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಯಲ್ಲಾಪುರ ಓಣಿಯ ಮೆಹಬೂಬ್ ನಗರದಲ್ಲಿ ನಡೆದಿದ್ದು, ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೈನೂ ಪೌಡಲ್ ಎಂಬಾತನ ಮೇಲೆ ಸಮೀರ್ ತಹಶಿಲ್ದಾರ ಎಂಬ ವ್ಯಕ್ತಿ ಹಾಗೂ ಆತನ ಸಹಚರರು ಹಲ್ಲೆ ಮಾಡಿದ್ದಾರೆ. ಇಲ್ಲಿನ ಮೆಹಬೂಬ್ ನಗರದಲ್ಲಿನ ಮೆಡಿಕಲ್ ಅಂಗಡಿ ಬಂದ್ ಮಾಡಿ ಮನೆಗೆ ತೆರಳುತ್ತಿದ್ದ ಸಮೀರ್ ಹಾಗೂ ಆತನ ಸಹಚರರು ಸೇರಿ ಮೈನೂ ಮೇಲೆ ಮೂಗಿಗೆ ರಕ್ತ ಬರುವ ಹಾಗೇ ಹೊಡೆದು ಮನಬಂದಂತೆ ಹಲ್ಲೆ ನಡೆಸಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೈನೂ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ. ಘಟನೆ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.