ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾಗಿರುವ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಬರಟಗಿ ಕ್ರಾಸ್ ಬಳಿ ರವಿವಾರ ಸಂಭವಿಸಿದೆ. ಹಾಸೀಮಬಿ ಹಕೀಮ ಮೃತಪಟ್ಟಿರುವ ದುರ್ದೈವಿ. ಇನ್ನು ಗೂಡ್ಸ್ನಲ್ಲಿದ್ದ ರೋಹಿತ ಹಾಗೂ ಆಸ್ಮಾಬಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.