ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ಜಿಲ್ಲೆಯ ಮಹಾರಾಷ್ಟ್ರದ ಗಡಿಭಾಗದಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ತಿಕೋಟಾ ತಾಲೂಕಿನ ಘೋಣಸಗಿ, ಕಳ್ಳಕವಟಗಿ, ಹುಬನೂರ, ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಸಿದ್ದಾಪುರ ಕೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಮಹಾರಾಷ್ಟ್ರದ ಬಿವರಗಿ, ಮೊರಬಗಿ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವ ರಾತ್ರಿ 10.05 PM ಹಾಗೂ ನಸುಕಿನ 1.47 AM ಭೂಕಂಪನ ಆಗಿದೆ. ಇನ್ನೂ ನಸುಕಿನ 1.47ಕ್ಕೆ ಆದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.7 ರಷ್ಟು ಪ್ರಮಾಣ ದಾಖಲಾಗಿದೆ. ಭೂಕಂಪನದ ಕೇಂದ್ರ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಬಿವರಗಿ ದಾಖಲಾಗಿದೆ. ಕಳೆದೆರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಹಲವಾರು ಬಾರಿ ಭೂಮಿ ಕಂಪಿಸಿದೆ.